ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಪ್ರವೇಶೋತ್ಸವ

New Project (18)
Published on

ಕಾಸರಗೋಡು: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರವೇಶೋತ್ಸವ ಕಾರ್ಯಕ್ರಮವನ್ನು ಎಣ್ಮಕಜೆ ಪಂಚಾಯಿತಿ ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್ ಉದ್ಘಾಟಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ನಾರಾಯಣ ನಾಯಕ್ ನಲ್ಕ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ರಮ್ಲಾ ಇಬ್ರಾಹಿಂ, ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷ ವೆಂಕಟರಾಜ ಮಿತ್ರ, ಮುಖ್ಯಶಿಕ್ಷಕ ಕೇಶವ ಪ್ರಕಾಶ್ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿಯರಾದ ವಿದ್ಯಾರತ್ಮ ಸ್ವಾಗತಿಸಿದರು. ಅಭಿಲಾಷಾ ಕಾರ್ಯಕ್ರಮ ನಿರೂಪಿಸಿದರು. ಅನ್ನಪೂರ್ಣ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net