ಸತ್ಯನಾರಾಯಣ ಪೂಜೆ, ಬೆಳ್ಳಿ ರಥೋತ್ಸವ

sathyanarayan
Published on

ಗಂಗೊಳ್ಳಿ: ಮರವಂತೆಯ ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಬೆಳ್ಳಿ ರಥೋತ್ಸವ ಬುಧವಾರ ನಡೆಯಿತು.

ಈ ಭಾಗದ ಮೀನುಗಾರರು ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಿದರು. ಬಳಿಕ ಮಹಾರಾಜ ಸ್ವಾಮಿ ಶ್ರೀ ವರಾಹ ದೇವರ ಬೆಳ್ಳಿ ರಥೋತ್ಸವ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ, ಕಾರ್ಯದರ್ಶಿ ಶೇಖರ ಖಾರ್ವಿ, ಮಾಜಿ ಅಧ್ಯಕ್ಷ ವಾಸುದೇವ ಖಾರ್ವಿ, ಶ್ರೀರಾಮ ಕರಾವಳಿ ಸಹಕಾರಿ ಸಂಘ ಅಧ್ಯಕ್ಷ ವೆಂಕಟರಮಣ ಖಾರ್ವಿ, ಸಮಿತಿ ಪದಾಧಿಕಾರಿಗಳು, ಮೀನುಗಾರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net