

ಸವದತ್ತಿ (ಬೆಳಗಾವಿ) ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ಪರವಾಗಿ ಹಮ್ಮಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದ ಸಾರ್ವಜನಿಕ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿದೆ. ಅಭ್ಯರ್ಥಿ ರತ್ನಾ ಮಾಮನಿ ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಅಜಿತ್ ದೇಸಾಯಿ ಇತರರು ಸಾಥ್ ನೀಡಿದರು.