ಸಾಧಕರನ್ನು ಆದರ್ಶವಾಗಿಟ್ಟುಕೊಂಡರೆ ಸಾಧನೆ ಸಾಧ್ಯ: ಸೀತಾರಾಮ ರೈ ಸಲಹೆ

annual day-1
ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವವನ್ನು ಸಂಸ್ಥೆಯ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಕಡಬ

ವಿದ್ಯಾಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆ ಗುರುತಿಸಿ ಹೊರತರುವ ಕೆಲಸ ಮಾಡುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಧನಕನನ್ನು ಆದರ್ಶವಾಗಿಟ್ಟುಕೊಂಡು ಸಾಧನೆ ಮಾಡಬೇಕು ಎಂದು ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಹೇಳಿದರು.

ಸವಣೂರಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಅತಿಥಿಯಾಗಿದ್ದ ವಿವೇಕಾನಂದ ಕಾಲೇಜಿನ ನಿವೃತ್ತ ಉಪನ್ಯಾಸಕ ಎಚ್.ಜಿ ಶ್ರೀಧರ್ ಮಾತನಾಡಿ, ಜಗತ್ತು ಬಯಸುವ ಹಾಗೆ ನಾವು ಬದುಕಬೇಕು. ಆದ್ದರಿಂದ ಮನಸ್ಸಿಗೆ ಒಂದು ಚೌಕಟ್ಟು ನಿರ್ಮಿಸಿ ಬದುಕು ರೂಪಿಸಿಕೊಳ್ಳಬೇಕು ಎಂದರು.

ವಿ.ಎಂ.ವೇರ್ ಲೀಡ್ ಡಾಟಾಬೇಸ್ ಆಡಳಿತಾಧಿಕಾರಿ ಮನೋಜ್ ರೈ ಮಾಡಾವು ಶುಭಹಾರೈಸಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಪ್ರಾಂಶುಪಾಲ ಶೇಷಗಿರಿ ಎಂ., ಪದವಿ ವಿಭಾಗದ ಪ್ರಾಂಶುಪಾಲ ಸೀತಾರಾಮ ಕೇವಳ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಪುಷ್ಪಾವತಿ ಉಪಸ್ಥಿತರಿದ್ದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ಡಾ.ಕೆ. ನಾರಾಯಣ ಮೂರ್ತಿ ವರದಿ ವಾಚಿಸಿದರು. ಸಾಧಿಕ್ ಸ್ವಾಗತಿಸಿದರು. ಸ್ವಸ್ತಿ ವಂದಿಸಿದರು. ಶಮೀರ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net