

ಸವಣೂರ: ಕಿವಿ ನೋವು ತಾಳಲಾರದೆ ವೃದ್ಧೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
ಗ್ರಾಮದ ದ್ಯಾಮವ್ವ ನಿಂಗಪ್ಪ ಕಲಕೋಟಿ (70) ಮೃತ ವೃದ್ಧೆ.
ಇವರು ವಿಪರೀತ ಕಿವಿ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.