ಅವಕಾಶ ಸದ್ಬಳಕೆಯಿಂದ ಯಶಸ್ಸು : ಸೋಮಶೇಖರ ನಾಯಕ್ ಅನಿಸಿಕೆ

New Project (23)
Published on

ಕಡಬ: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ’ಸಮ್ಮಾನ ರಶ್ಮಿ’ ಗುರುವಾರ ನಡೆಯಿತು. ಕುಕ್ಕೆ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ಗೌರವಿಸುವ ಅಧ್ಯಯನಕ್ಕೆ ಆದ್ಯತೆ ನೀಡಬೇಕು ಶೈಕ್ಷಣಿಕ ಕಾಲಘಟ್ಟದಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಅದ್ಭುತವಾದ ಅವಕಾಶಗಳು ದೊರೆಯುತ್ತವೆ, ಅವುಗಳನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಪ್ರಜೆಯಾಗಿ ಬಾಳಬೇಕು ಎಂದರು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರ ರತ್ನ ಸವಣೂರು ಸೀತಾರಾಮ ರೈ ಮಾತನಾಡಿ, ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿರುವುದು ತೀರಾ ಸಾಮಾನ್ಯವಾಗಿದೆ. ಶಿಕ್ಷಕರ ಜತೆ ಪಾಲಕರೂ ಕೈ ಜೋಡಿಸಿ ಅವರನ್ನು ಹುರಿದುಂಬಿಸಬೇಕಾಗಿದೆ. ನಮ್ಮಲ್ಲಿ ಕ್ರೀಡೆಗೆ ಬೇಕಿರುವ ಸಕಲ ವ್ಯವಸ್ಥೆಗಳನ್ನು ಶಿಸ್ತುಬದ್ಧವಾಗಿ ಮಾಡಿದ್ದು ಮಕ್ಕಳು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿಗಳಾದ ಸವಣೂರು ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮ್ ಪ್ರಸಾದ್ ರೈ ಕಲಾಯಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ ಮತ್ತು ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ಉಪಸ್ಥಿತರಿದ್ದರು.

ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ ಸ್ವಾಗತಿಸಿದರು. ಬೋಧಕ ವರ್ಗದ ಆಶಾಲತಾ, ಸುನೀತಾ, ಅನಿತಾ, ಶೀಲಾವತಿ, ಸೌಮ್ಯಾ ಮತ್ತು ವೇದಾವತಿ ಬಹುಮಾನ ವಿತರಣೆ ಕಾರ್ಯಗಳಲ್ಲಿ ಸಹಕರಿಸಿದರು. ವಿದ್ಯಾರ್ಥಿನಿಯರಾದ ರಶ್ಮಿತಾ ನಿರೂಪಿಸಿ, ಫಾತಿಮಾತ್ ಹನ್ನಾ ಸಂವಿಧಾನದ ಪೀಠಿಕೆ ವಾಚಿಸಿ, ಸುನೀಕ್ಷಾ ಅತಿಥಿಗಳನ್ನು ಪರಿಚಯಿಸಿದರು. ಎಂ.ವೈಷ್ಣವಿ ವಂದಿಸಿದರು. ಸಂಗೀತ ಗುರು ಪಾರ್ವತಿ ಪದ್ಯಾಣ ಅವರ ಶಿಷ್ಯರಿಂದ ಸುಗಮ ಸಂಗೀತ ಮತ್ತು ಉಪನ್ಯಾಸಕಿ ರಂಜಿತಾ ಮಾರ್ಗದರ್ಶನದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ಪ್ರಾಪ್ತಿ ಪಿ.ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net