೧೪ರಂದು ‘ಶೀಂಟೂರು ಸ್ಮೃತಿ- ೨೦೨೫’ ಕಾರ್ಯಕ್ರಮ

oplus_0
oplus_0
Published on

ಪುತ್ತೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ಆ.೧೪ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದ್ದು, ಶೀಂಟೂರು ಸನ್ಮಾನ ಪ್ರದಾನ ಮತ್ತು ಶಿಷ್ಯವೇತನ ವಿತರಣೆಯ ‘ಶೀಂಟೂರು ಸ್ಮೃತಿ - ೨೦೨೫’ ನಡೆಯಲಿದೆ ಎಂದು ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು.

ಶೀಂಟೂರು ನಾರಾಯಣ ರೈ ಅವರು ೨ನೇ ಮಹಾಯುದ್ಧದಲ್ಲಿ ಭಾರತೀಯ ಸೇನಾನಿಯಾಗಿ ಬರ್ಮದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಸೇನಾ ನಿವೃತ್ತಿ ಬಳಿಕ ಶಿಕ್ಷಕರಾಗಿ, ಸಹಕಾರಿ ಮತ್ತು ಕೃಷಿಕರಾಗಿ ಹೆಸರು ಮಾಡಿದವರು. ಅವರ ಪ್ರೇರಣೆಯಿಂದ ವಿದ್ಯಾಗಂಗೋತ್ರಿಯಲ್ಲಿ ೨೦೦೧ರಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ. ಸಂಸ್ಥೆಯ ದಶಮಾನೋತ್ಸವ ಆಚರಣೆ ಸಂದರ್ಭ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ವಿನಯ ಹೆಗ್ಡೆ ಪ್ರಸ್ತಾಪಿಸಿದಂತೆ ಶೀಂಟೂರು ನಾರಾಯಣ ರೈ ಶಿಕ್ಷಣ ಪ್ರತಿಷ್ಠಾನ ಸವಣೂರು ಆಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎ.ಜೆ. ಆಸ್ಪತ್ರೆ ಸಂಸ್ಥಾಪಕ ಡಾ.ಎ.ಜೆ.ಶೆಟ್ಟಿ ೧೦ ಲಕ್ಷ ರೂ., ಕುಲಪತಿಯಾಗಿದ್ದ ವಿನಯ ಹೆಗ್ಡೆ ೨ ಲಕ್ಷ ರೂ. ನೀಡಿದ್ದು, ಇದರ ಬಡ್ಡಿ ಹಣವನ್ನು ಪ್ರತಿಭಾವಂತ ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗಿದೆ. ಬಳಿಕ ಹಲವು ಮಂದಿ ದಾನಿಗಳು ಉತ್ತಮ ಮೊತ್ತ ನೀಡುತ್ತಾ ಬಂದು ೩೫ ಲಕ್ಷ ರೂ.ನ ಬಡ್ಡಿಯಲ್ಲಿ ನೆರವು ನೀಡಲಾಗುತ್ತಿದೆ. ಸಂಸ್ಥೆಯ ವಿವಿಧ ತರಗತಿಗಳ ಹತ್ತು ಮಂದಿ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಶಿಷ್ಯವೇತನ ನೀಡಲಾಗುತ್ತದೆ. ಒಂದು ವರ್ಷ ಒಬ್ಬ ಸೇನಾನಿ ಮತ್ತು ಇನ್ನೊಂದು ವರ್ಷದಲ್ಲಿ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸಲಾಗುತ್ತದೆ ಎಂದರು.

ಆ.೧೪ರಂದು ಬೆಳಗ್ಗೆ ೧೦ಕ್ಕೆ ಕ್ಷೇತ್ರದ ಶಿಕ್ಷಣಾಽಕಾರಿ ಲೋಕೇಶ್ ಎಸ್.ಆರ್. ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸ್ಥೆ ಆಡಳಿತಾಽಕಾರಿ ಅಶ್ವಿನ್ ಎಲ್.ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಕರ್ನಲ್ ರಾಜೇಶ್ ಹೊಳ್ಳ ಎಸ್.ಎಂ. ಅವರಿಗೆ ಶೀಂಟೂರು ಸನ್ಮಾನ ನಡೆಯಲಿದ್ದು, ಜಿ.ಎಲ್ ಆಚಾರ್ಯ ಜುವೆಲ್ಲರ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಬಲರಾಮ ಆಚಾರ್ಯ ಸನ್ಮಾನಿಸಲಿದ್ದಾರೆ. ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಸೂಂತೋಡು ಹೂವಯ್ಯ ಅವರು ಶೀಂಟೂರು ಸಂಸ್ಮರಣೆ ಮಾಡಲಿದ್ದಾರೆ. ಎಸ್‌ಎನ್‌ಆರ್ ರೂರಲ್ ಎಜುಕೇಶನ್ ಟ್ರಸ್ಟಿಗಳಾದ ಎನ್.ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ ಅಶ್ವಿನ್ ಎಲ್.ಶೆಟ್ಟಿ, ಎಸ್‌ಎನ್‌ಆರ್ ರೂರಲ್ ಎಜುಕೇಶನ್ ಟ್ರಸ್ಟಿಗಳಾದ ಎನ್.ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯ ಪ್ರಾಂಶುಪಾಲೆ ಶಶಿಕಲಾ ಎಸ್.ಆಳ್ವ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net