ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸಾವರರು ಮೃತ

07 (1)
ಉದಯ, ಚಂದನ್
Published on

ಸುಂಟಿಕೊಪ್ಪ: ಮೈಸೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡ ರಾತ್ರಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿದ್ದಾರೆ.

ಪಟ್ಟಣದ ಮಧುರಮ್ಮ ಬಡಾವಣೆ ನಿವಾಸಿಗಳಾದ ಏಳುಮಲೈ ಎಂಬುವರ ಪುತ್ರ ಉದಯ(21) ಹಾಗೂ ದಿ.ಗಣಪತಿ ಪೊನ್ನವ್ವ ಎಂಬುವರ ಪುತ್ರ ಚಂದನ್ (20) ಮೃತಪಟ್ಟವರು.

ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಆಗಮಿಸುತ್ತಿದ್ದಾಗ ಕೂರ್ಗ್‌ಹಳ್ಳಿ ಬಿರ್ಚ್‌ವುಡ್ ರೆಸಾರ್ಟ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೂ ಮುಖ, ತಲೆ, ಕೈ, ಕಾಲಿಗೆ ತೀವ್ರ ಪೆಟ್ಟಾಗಿದೆ. ಡಿಕ್ಕಿ ರಭಸಕ್ಕೆ ಹೆದ್ದಾರಿಯಲ್ಲಿ ಬೆಳೆದು ನಿಂತಿದ ಪೊದೆಯೊಳಗೆ ಇಬ್ಬರೂ ಬಿದ್ದಿದ್ದಾರೆ. ಮಂಗಳವಾರ ಮುಂಜಾನೆಯವರೆಗೂ ಅಪಘಾತ ನಡೆದಿರುವುದು ಯಾರ ಗಮನಕ್ಕೂ ಬಂದಿಲ್ಲ.

ಈ ನಡಯವೆ ತೋಟಕ್ಕೆ ಕೂಲಿ ಕಾರ್ಮಿಕರನ್ನು ಸಾಗಿಸುವ ಜೀಪ್ ಚಾಲಕ ಮೃತದೇಹ ಬಿದ್ದಿರುವುದನ್ನು ಗಮನಿಸಿ ಕೂಡಲೇ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾನೆ. ಬಳಿಕ ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್‌ಕೋಟ್ಯಾನ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಮೃತಹೇಗವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net