ನೆಲ, ಜಲ, ಸಂಸ್ಕೃತಿ ಉಳಿವಿಗೆ ಮುಂದಾಗೋಣ

05 KRN-1
Published on

ಕೆ.ಆರ್.ನಗರ: ಕನ್ನಡ ನಾಡು-ನುಡಿಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಕನ್ನಡಿಗರಾದ ನಮ್ಮ ಮೇಲಿದ್ದು ಕಂಕಣ ಬದ್ಧರಾಗಿ ಶ್ರಮಿಸೋಣ ಎಂದು ಶಾಸಕ ಡಿ.ರವಿಶಂಕರ್ ಅಭಿಪ್ರಾಯಪಟ್ಟರು.


ಪಟ್ಟಣಕ್ಕೆ ಬುಧವಾರ ಆಗಮಿಸಿದ ಸುವರ್ಣ ಕರ್ನಾಟಕ ಸಂಭ್ರಮ ಜ್ಯೋತಿ ರಥಯಾತ್ರೆಯನ್ನು ಮೈಸೂರು ರಸ್ತೆಯಲ್ಲಿರುವ ಶ್ರೀ ಆದಿಶಕ್ತಿ ತೋಪಮ್ಮ ದೇವಾಲಯ ಬಳಿ ಸ್ವಾಗತಿಸಿ ಅವರು ಮಾತನಾಡಿದರು. ನೆಲ, ಜಲ, ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೂ ನೀಡಬೇಕು. ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ಜ್ಯೋತಿ ರಥಯಾತ್ರೆ ಮೂಲಕ ಎಲ್ಲ ಜಿಲ್ಲೆ, ತಾಲೂಕು, ಗ್ರಾಮೀಣ ಪ್ರದೇಶಗಳಲ್ಲಿ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.


ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ತೆರಳಿದ ನಂತರ ಹಂಪಾಪುರ, ಅರ್ಜುನಹಳ್ಳಿ, ಹೊಸ ಅಗ್ರಹಾರ, ಭೇರ್ಯ ಗ್ರಾಮ ಪಂಚಾಯಿತಿ ಮೂಲಕ ಸಾಲಿಗ್ರಾಮಕ್ಕೆ ತೆರಳಿತು. ಗುರುವಾರ ಸಾಲಿಗ್ರಾಮ ಪಟ್ಟಣ ಮತ್ತು ವಿವಿಧ ಗ್ರಾಮಗಳಲ್ಲಿ ಸಂಚರಿಸಲಿದೆ.


ತಹಸೀಲ್ದಾರ್ ಜಿ.ಸುರೇಂದ್ರ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್, ತಾಪಂ ಇಒ ಕುಲದೀಪ್, ಟಿಎಚ್‌ಒ ಡಾ.ಡಿ.ನಟರಾಜ್, ಬಿಇಒ ಆರ್.ಕೃಷ್ಣಪ್ಪ, ಸಿಡಿಪಿಒ ಅಣ್ಣಯ್ಯ, ಸಹಾಯಕ ಕೃಷಿ ನಿರ್ದೇಶಕ ಕೆ.ಜೆ.ಮಲ್ಲಿಕಾರ್ಜುನ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಪುರಸಭಾ ಸದಸ್ಯ ಕೋಳಿ ಪ್ರಕಾಶ್, ಕಸಪಾ ತಾಲೂಕು ಅಧ್ಯಕ್ಷ ಜಿ.ಡಿಂಡಿಮ ಶಂಕರ್, ಜಿಲ್ಲಾ ಗೌರವ ಕೋಶಾಧ್ಯಕ್ಷ ಜಿ.ಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಎಲ್.ಪಿ.ರವಿಕುಮಾರ್, ಎಚ್.ಎಚ್.ನಾಗೇಂದ್ರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net