ನುಗ್ಗೇಹಳ್ಳಿಯ ಪ್ರಾಚೀನ ದೇವಾಲಯ ಅಭಿವೃದ್ಧಿಪಡಿಸಿ

IMG-20250322-WA0017
Published on

ನುಗ್ಗೇಹಳ್ಳಿ : ಗ್ರಾಮದಲ್ಲಿರುವ ವಿಜಯನಗರ ಅರಸರ ಸಾಮಂತರ ಕಾಲದ ದೇವಾಲಯಗಳನ್ನು ಧಾರ್ಮಿಕ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಡಿದರೆ ಪ್ರವಾಸೋದ್ಯಮಕ್ಕೆ ಮಹತ್ವ ನೀಡಿದಂತಾಗುತ್ತದೆ ಎಂದು ಹಾಸನ ಸರ್ಕಾರಿ ಕಲಾ ವಾಣಿಜ್ಯ ಕಾಲೇಜು ಪ್ರಾಂಶುಪಾಲ ಡಾ. ಎಂ ಬಿ. ಇರ್ಷಾದ್ ಸರ್ಕಾರಕ್ಕೆ ಒತ್ತಾಯಿಸಿದರು. ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗ ಹಾಸನ ಸರ್ಕಾರಿ ವಾಣಿಜ್ಯ ಕಾಲೇಜು ಹಾಗೂ ಗ್ರಾಮದ ವಿವಿಧ ಸಂಘ, ಸಂಸ್ಥೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ಮಾರಕಗಳ ಸಂರಕ್ಷಣಾ ಜಾಗೃತಿ ಅಭಿಯಾನದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಅಭಿಯಾನಕ್ಕೆ ಗ್ರಾಮದ ಪುರವರ್ಗ ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿ ಮಾತನಾಡಿ, ಸ್ಮಾರಕಗಳ ಸಂರಕ್ಷಣೆಗೆ ಎಲ್ಲರೂ ಸಹಕರಿಸಬೇಕು ಎಂದರು. ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ದೇವಾಲಯಗಳ ಸಂರಕ್ಷಣೆಗೆ ಡಾ. ಎಂ ಬಿ ಇರ್ಷಾದ್ ಹೆಚ್ಚು ಸಂಶೋಧನೆ ನಡೆಸಿದ್ದಾರೆ. ಗ್ರಾಮದ ಇತಿಹಾಸ ಜನರಿಗೆ ತಿಳಿಸುವ ಕೆಲಸ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ದೇವಾಲಯಗಳ ಬಗ್ಗೆ ಹೆಚ್ಚು ಮಾಹಿತಿ ದೊರಕಿದೆ. ಸರ್ಕಾರ ಈ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ ಎಂದು ಒತ್ತಾಯಿಸಿದರು. ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಜೆ. ಸೋಮನಾಥ್ ಮಾತನಾಡಿದರು.

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷೆ ಛಾಯಾ ಕೃಷ್ಣಮೂರ್ತಿ, ಜಿಪಂ ಮಾಜಿ ಅಧ್ಯಕ್ಷೆ ಮಹದೇವಮ್ಮ ಶಂಕರ್, ಅರ್ಚಕ ರಾಜು, ಕಾಲೇಜು ಪ್ರಾಧ್ಯಾಪಕರಾದ ಗೋಪಾಲ್, ಬಸವೇಗೌಡ, ಲಿಂಗಮೂರ್ತಿ, ಪ್ರಮುಖರಾದ ರಮೇಶ್, ಚನ್ನೇಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net