

ಹೊಳೆನರಸೀಪುರ: ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬುಧವಾರ ಜಲ ಸಂರಕ್ಷಣೆಗಾಗಿ ಪರಿಸರ ಉಳಿಸಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಕೆ.ಹನುಮಂತಪ್ಪ ಮಾತನಾಡಿ, ಜಲ ಸಂರಕ್ಷಣೆಗೆ ಪರಿಸರ ಉಳಿಸಬೇಕು. ಜೀವ ಸಂಕುಲದ ಉಳಿವಿಗಾಗಿ ಪರಿಸರ ಸಂರಕ್ಷಣೆ ಅಗತ್ಯ. ನಾವು ನಮ್ಮ ಜೀವನಕ್ಕೆ ನೀಡುವ ಪ್ರಾಮುಖ್ಯತೆಯಷ್ಟೆ ಪರಿಸರ ಸಂರಕ್ಷಣೆ ಮತ್ತು ಜಲದ ಉಳಿವಿಗಾಗಿಯೂ ನೀಡಬೇಕು ಎಂದು ಸಲಹೆ ನೀಡಿದರು. ಹರಿಹರಪುರ ವಲಯದ ಪ್ರಗತಿ ಬಂಧು ಹಾಗೂ ಸ್ವಸಹಾಯ ಸಂಘಗಳು ಮತ್ತು ಗ್ರಾಮಸ್ಥರಿಗೆ ವಿವಿಧ ಸಸಿಗಳನ್ನು ವಿತರಿಸಲಾಯಿತು. ಕೋಡಿಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಹಿರೇಗೌಡ ಕಾರ್ಯಕ್ರಮ ಉದ್ಘಾಟಿಸಿದರು.