

ಹಾವೇರಿ: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ವಾಣಿಜ್ಯ ಪದವಿ ವಿಭಾಗದ ವಿದ್ಯಾರ್ಥಿನಿ ಸವಿತಾ ಸಿ. ಸುತಮನಿ 2022ನೇ ಸಾಲಿನ ಪರೀಕ್ಷೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 4ನೇ ರ್ಯಾಂಕ್ ಪಡೆದಿದ್ದಾರೆ.
ಒಟ್ಟು 3,700 ಅಂಕಗಳಿಗೆ 3,592 ಅಂಕಗಳನ್ನು ಪಡೆದು ಶೇ. 97.08ರಷ್ಟು ಫಲಿತಾಂಶ ಪಡೆದಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ತಿಳಿಸಿದ್ದಾರೆ.