ಫೆ.5ರಂದು ಸವಿತಾ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಆಯೋಜನೆ

Savita Maharshi Jayanti
Published on

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಫೆ.5ರಂದು ಬೆಳಗ್ಗೆ 11ಗಂಟೆಗೆ ನಗರದ ಕರ್ನಾಟಕ ಸಂಘದ ಕೆವಿಎಸ್ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ರವಿಕುಮಾರ್ ಗಣಿಗ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ರಾಂತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಉಪನ್ಯಾಸ ನೀಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net