

ಮಂಡ್ಯ: ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜ.7ರಂದು ಮಧ್ಯಾಹ್ನ 2.30ಕ್ಕೆ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ಜಯರಾಮ ಅವರಿಗೆ ಅಭಿನಂದನೆ, ಕ್ಯಾಲೆಂಡರ್ ಬಿಡುಗಡೆ ಹಾಗೂ ಶಾಸಕ ರವಿಕುಮಾರ್ ಗಣಿಗ ಜನ್ಮದಿನಾಚರಣೆ ಆಯೋಜಿಸಲಾಗಿದೆ ಎಂದು ಸಂಘದ ಸದಸ್ಯ ಪ್ರತಾಪ್ ಹೇಳಿದರು.
ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸವಿತಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಮಾಜಿ ಎಂಎಲ್‌ಸಿ ಬಿ.ರಾಮಕೃಷ್ಣ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಗರಾಜು, ವೈರಮುಡಿ, ಸೋಮಣ್ಣ ಇದ್ದರು.