ಹೆಬ್ಬಾಲೆ ಕಾಲೇಜಿನಲ್ಲಿ ಸಾವಿತ್ರಿ ಬಾಯಿ ಫುಲೆ ಜಯಂತಿ

4ark2
ಅರಕಲಗೂಡು ತಾಲೂಕಿನ ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಶನಿವಾರ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಜಯಂತಿ ಆಚರಿಸಲಾಯಿತು. ಲೀಲಾ ಸಂಪಿಗೆ, ಡಾ.ಶಾಂತ, ಲಕ್ಷ್ಮಣ್ ಇತರರಿದ್ದರು.
Published on

ಅರಕಲಗೂಡು: ತಾಲೂಕಿನ ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಶನಿವಾರ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಾಹಿತಿ ಲೀಲಾ ಸಂಪಿಗೆ ಅವರು ವಿದ್ಯಾರ್ಥಿಗಳಿಗೆ ಸಾವಿತ್ರಿ ಬಾಯಿ ಫುಲೆ ಅವರ ಜೀವಮಾನದ ಸಾಧನೆ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ಸಾವಿತ್ರಿ ಬಾ ಫುಲೆ ಅವರ ಜೀವನ ಚರಿತ್ರೆ ಮತ್ತು ಸಾಮಾಜಿಕ ಹೋರಾಟದ ಕುರಿತು ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ನೋಟ್ ಬುಕ್, ಲೇಖನಿ ವಿತರಿಸಲಾಯಿತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಡಾ.ಶಾಂತಾ ಅತ್ನಿ, ಲಕ್ಷ್ಮಣ್, ಮುಖಂಡರಾದ ಹರೀಶ್ ಅತ್ನಿ, ಈರೇಶ್ ಹಿರೇಹಳ್ಳಿ, ರಂಗಸ್ವಾಮಿ, ಶಂಕರೇಗೌಡ, ರಾಜು, ವೇದಿಕೆ ಮಹಿಳಾ ಸಂಚಾಲಕಿ ರಾಧಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net