ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಆದ್ಯತೆ

04arsph1ep
Published on

ಅರಸೀಕೆರೆ: ಮಹಿಳಾ ಶಿಕ್ಷಣಕ್ಕೆ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರ ಎಂದು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಚ್.ಕೆ.ರಾಜಶೇಖರಪ್ಪ ಹೇಳಿದರು.

ತಾಲೂಕಿನ ಶಶಿವಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೂ ಶಿಕ್ಷಣದ ಅವಶ್ಯಕತೆಯಿದೆ ಎಂಬುದನ್ನು ಪ್ರತಿಪಾದಿಸುವ ಮೂಲಕ ಸ್ವಾತಂತ್ರೃ ಪೂರ್ವದಲ್ಲಿಯೇ ಶಾಲೆಗಳನ್ನು ತೆರೆದು ಶಿಕ್ಷಣ ನೀಡಲಾರಂಭಿಸಿದರು. ಪರಿಣಾಮ ಸಹಸ್ರಾರು ಹೆಣ್ಣುಮಕ್ಕಳ ಭವಿಷ್ಯ ರೂಪುಗೊಂಡಿದೆ ಎಂದರು.

ಶಿಕ್ಷಕರಾದ ಆರ್.ಕೆ.ಕುಮಾರ್, ಎಂ.ಬಿ.ಪುಟ್ಟಾಬೋವಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net