ಎಸ್‌ಸಿ, ಎಸ್‌ಟಿ ನೌಕರರ ಸಂಘದಿಂದ ಸಿಎಂ ಭೇಟಿ

h23-sc employs
Published on

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಅರೆ ಸರ್ಕಾರಿ ನೌಕರರ ಎಸ್‌ಸಿ, ಎಸ್‌ಟಿ ನೌಕರರ ಸಂಘದ ಪದಾಧಿಕಾರಿಗಳು ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ಭೇಟಿಯಾಗಿ ಸಮಸ್ಯೆಗಳನ್ನು ಅರುಹಿದರು.

ಸಂಘದ ಅಧ್ಯಕ್ಷ ರಂಜಿತ್ ಮಾನ್ಕರ್, ಧಾರವಾಡ ಜಿಲ್ಲಾಧ್ಯಕ್ಷೆ ಡಾ. ಜಾನಕಿ ತೊರವಿ ಅವರ ನೇತೃತ್ವದಲ್ಲಿ ಭೇಟಿಯಾಗಿ ಸಂಘದ ಸದಸ್ಯರ ಸಮಸ್ಯೆಗಳನ್ನು ತಿಳಿಸಿದರು. ಮುಂಬರುವ ದಿನಗಳಲ್ಲಿ ನಡೆಸಲಾಗುವ ಹಲವು ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಪದಾಧಿಕಾರಿಗಳಾದ ವಿಠ್ಠಲ ಚಲವಾದಿ, ದಾನಪ್ಪ ಚಲವಾದಿ, ಸುಭಾಷ ಫುಲೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net