ಎಸ್‌ಸಿ ಎಸ್‌ಟಿ ಸಮೀಕ್ಷಾ ಕಾರ್ಯದ ಅವಧಿ ಮುಂದುವರಿಕೆ

DC KARWAR
Published on

ಕಾರವಾರ: ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆಯ ಅವಧಿಯನ್ನು ಮತ್ತೆ  ವಿಸ್ತರಿಸಲಾಗಿದೆ. ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ ಏಕ

ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು

ಮನೆ ಮನೆ ಸಮೀಕ್ಷಾ ಕಾರ್ಯವನ್ನು ಮೇ 25 ರವರೆಗೆ ಕೈಗೊಳ್ಳಲಾಗಿತ್ತು. ಅದನ್ನು ಮೇ.29 ರ ವರೆಗೆ ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕಾರ್ಯವನ್ನು ಮೇ 30 ರಿಂದ ಜೂನ್ 1 ರವರೆಗೆ ಮರು ನಿಗಧಿಪಡಿಸಲಾಗಿದ್ದು, ಆನ್ ಲೈನ್ ಮೂಲಕ ಸ್ವಯಂ ಘೋಷಣೆ ಜೂನ್ 1 ರ ವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗಳು ಆಧಾರ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸಬೇಕು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಕಂಟ್ರೋಲ್ ರೂಂ/ ಸಹಾಯವಾಣಿ ತೆರೆಯಲಾಗಿದ್ದು ದು.ಸಂ. 08382-229857/9483511015 ನ್ನು ಸಂಪರ್ಕಿಸಬಹುದಾಗಿದ್ದು, ಹೆಚ್ಚಿನ ವಿವರಗಳಿಗಾಗಿ ರಾಜ್ಯ ಮಟ್ಟದ ಸಹಾಯವಾಣಿ ಸಂ: 080- 22634300 ನ್ನು ಸಂಪರ್ಕಿಸುವAತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net