5 ಲಕ್ಷ ಜನ ಸೇರಿಸಿ ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ ನಡೆಸಲು ಕಾಂಗ್ರೆಸ್​ ಸಜ್ಜು

congress40
Published on

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಪೂರ್ವ ಭಾವಿಯಾಗಿ ಎಸ್ಸಿ-ಎಸ್ಟಿ ಸಮುದಾಯದ ಐದು ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ಮಾಜಿ ಡಿಸಿಎಂ ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ ಸೇರಿದಂತೆ ಎಸ್ಸಿ ಎಸ್ಟಿ ಸಮುದಾಯದ ಪ್ರಮುಖರೆಲ್ಲ ಸೇರಿ ಸಮಾವೇಶದ ಮಾಹಿತಿಯನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.

ಮಧ್ಯ ಕರ್ನಾಟಕದ ಚಿತ್ರದುರ್ಗದಲ್ಲಿ 2022ರ ಜನವರಿ 8ರಂದು ಐಕ್ಯತಾ ಸಮಾವೇಶ ನಡೆಸಲಾಗುತ್ತದೆ, ಇಲ್ಲಿಂದ ಸಂದೇಶ ಕಳಿಸಲಾಗುತ್ತದೆ ಎಂದರು.

ನಾವು ನಿಮ್ಮೊಂದಿಗಿದ್ದೇವೆ ಎಂದು ಎಸ್ಸಿ-ಎಸ್ಟಿ ಸಮುದಾಯಕ್ಕೆ ಭರವಸೆ ಕೊಡುವುದು ಸಮಾವೇಶದ ಉದ್ದೇಶ ಎಂದು ಜಿ.ಪರಮೇಶ್ವರ್ ತಿಳಿಸಿದರು‌. ಸಮಾವೇಶದಲ್ಲಿ ದಲಿತ ಸಿಎಂ‌ ಹಕ್ಕೊತ್ತಾಯ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಈ ಬಗ್ಗೆ ಸೂಕ್ತ ಸಂದರ್ಭದಲ್ಲಿ ತೀರ್ಮಾನ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net