ಎಸ್‌ಸಿ, ಎಸ್‌ಟಿ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಎಚ್ಚರಿಕೆ; ಮೀಸಲು ಅನುದಾನ ದುರುಪಯೋಗವಾದರೆ ಕಠಿಣ ಕ್ರಮ

14 Dwd 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರದ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಹೊತ್ತ ಇಲಾಖಾ ಅಽಕಾರಿಗಳು ಬದ್ಧತೆ ಹಾಗೂ ಕಾಳಜಿಯಿಂದ ಕೆಲಸ ನಿರ್ವಹಿಸಬೇಕು. ಮೀಸಲು ಅನುದಾನ ದುರುಪಯೋಗವಾದರೆ ಕಠಿಣ ಕ್ರಮಕ್ಕೆ ಶಿಪಾರಸು ಮಾಡಲಾಗುವುದು ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಹೇಳಿದರು.

ನಗರದ ಸೃಜನಾ ರಂಗಮAದಿರದಲ್ಲಿ ಗುರುವಾರ ಆಯೋಜಿಸಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಽಕಾರಿಗಳು ತಮ್ಮ ದೈನಂದಿನ ಕಾರ್ಯನಿರ್ವಹಣೆಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಮೂಲಕ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕು. ಅನುದಾನದಲ್ಲಿ ಶೇ. 24ರಷ್ಟು ಅನುದಾನವನ್ನು ಮೀಸಲಿಡುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಸಮುದಾಯಗಳ ಜನಾಂಗಕ್ಕೆ ಬಳಕೆ ಮಾಡಬೇಕು. ಜಿಲ್ಲೆಯಲ್ಲಿ ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯಡಿ ನಿವೇಶನ ಹಾಗೂ ವಸತಿ ಇಲ್ಲದ ದೇವದಾಸಿಯರನ್ನು ಗುರುತಿಸಿ ಅವರಿಗೆ ಜಿಲ್ಲಾಡಳಿತದಿಂದ ಪುನರ್ವಸತಿ ಕಲ್ಪಿಸುವ ಕಾರ್ಯವಾಗಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಇರುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಎಸ್‌ಸಿ, ಎಸ್‌ಟಿ ಕಾಲನಿಯಿಂದ ನಿಗದಿತ ದೂರದಲ್ಲಿ ಮದ್ಯದ ಅಂಗಡಿಗಳು ಇರದಂತೆ ನಿಗಾ ವಹಿಸಬೇಕು. ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿಸಿ ಸಿಇಒ ಸ್ವರೂಪ ಟಿ.ಕೆ. ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಮಿಷನ್, ವೈಯಕ್ತಿಕ ಶೌಚಗೃಹ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಶಾಸಕ ಅಬ್ಬಯ್ಯ ಪ್ರಸಾದ್, ಸದಸ್ಯರಾದ ಬಸವರಾಜ ಮತ್ತಿಮುಡ, ಬಿ. ದೇವೆಂದ್ರಪ್ಪ, ಕೆ.ಸಿ. ವೀರೇಂದ್ರ ಪಪ್ಪಿ, ಕೃಷ್ಣಾ ನಾಯ್ಕ ಕೆ., ಎನ್. ರವಿಕುಮಾರ್, ದುರ್ಯೋಧನ ಐಹೊಳೆ, ಡಾ. ಎಂ. ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ಜಿಲ್ಲಾದಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹಾಗೂ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net