

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸ್ಕಾೃನಿಂಗ್ ಕೇಂದ್ರಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಆಗಾಗ ಭೇಟಿ ಪರಿಶೀಲನೆ ನಡೆಸುವಂತೆ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸ್ಕ್ಯಾನಿಂಗ್ ಸಂಸ್ಥೆಗಳಲ್ಲಿ ಎಂ ಪ್ಯಾನೆಲ್‌ಮೆಂಟ್ ಇಲ್ಲದೆ ರೇಡಿಯೋಲಜಿಸ್ಟ್, ಗೈನಕಾಲಜಿಸ್ಟ್, ಕಾರ್ಡಿಯೊಲಜಿಸ್ಟ್ ಅಥವಾ ಯಾವುದೇ ತಜ್ಞ ವೈದ್ಯರು ಸ್ಕಾೃನಿಂಗ್ ಮಾಡಿದರೆ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಸೂಚಿಸಿದರು.
ಏಪ್ರಿಲ್ ತಿಂಗಳಲ್ಲಿ ಖಾಸಗಿ 53 ಹಾಗೂ ಸರ್ಕಾರಿ 5 ಸ್ಕಾೃನಿಂಗ್ ಸೆಂಟರ್‌ಗಳ ತಪಾಸಣೆ ನಡೆಸಿದ್ದು ಮ ತಾಲೂಕು ಆರೋಗ್ಯಾಧಿಕಾರಿಗಳು ಖಾಸಗಿ 6 ಹಾಗೂ ಸರ್ಕಾರಿ 2 ಸ್ಕಾೃನಿಂಗ್‌ಸೆಂಟರ್‌ಗಳ ತಪಾಸಣೆ ನಡೆಸಿದ್ದಾರೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ತಿಳಿಸಿದರು.
ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷೆ ಡಾ.ಅಮೃತಾ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರಾದ ಡಾ. ನಂಜೇಶ್ ಕುಮಾರ್, ವಸಂತ ಪೆರಾಜೆ, ವಕೀಲ ಚಂದ್ರಹಾಸ ಕೆ., ಜಿಲ್ಲಾ ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಉಪಸ್ಥಿತರಿದ್ದರು.