

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗಕ್ಕೆ ಮೊಳಹಳ್ಳಿ ಶಿವರಾವ್ ಅವರು ಭದ್ರ ಅಡಿಪಾಯ ಹಾಕಿದ ಪರಿಣಾಮ ಇಲ್ಲಿನ ಸಹಕಾರಿ ಸಂಘಗಳು ಬಲಿಷ್ಠವಾಗಿ ಬೆಳೆದು ನಿಂತಿವೆ. ಸಹಕಾರಿ ಸಂಘಗಳನ್ನು ಕಟ್ಟುವ ಮೂಲಕ ಸಮಾಜದ ಸಬಲೀಕರಣಕ್ಕೆ ಮಹತ್ತರ ಕೊಡುಗೆ ನೀಡಿದ ಮೊಳಹಳ್ಳಿ ಅವರ ಹೆಸರು ಚಿರಸ್ಥಾಯಿಯಾಗಿದೆ ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ದ.ಕ ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ಶುಕ್ರವಾರ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ದಿ.ಮೊಳಹಳ್ಳಿ ಶಿವರಾವ್ ಅವರ 143ನೆ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಸದೃಢಗೊಳಿಸುವುದೇ ಮೊಳಹಳ್ಳಿ ಅವರಿಗೆ ನೀಡುವ ಗೌರವವಾಗಿದೆ ಎಂದರು.
ಸರ್ಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು , ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ , ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ , ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ ಭಟ್, ಭಾಸ್ಕರ್.ಎಸ್. ಕೋಟ್ಯಾನ್, ಎಂ.ವಾದಿರಾಜ ಶೆಟ್ಟಿ , ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ , ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೊಟ್ಟು , ಎಸ್.ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ , ಹರಿಶ್ಚಂದ್ರ , ಜೈರಾಜ್ ಬಿ ರೈ , ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್.ಎಚ್.ಎನ್. , ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಸ್ವಾಗತಿಸಿ, ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ವಂದಿಸಿದರು.