

ಮಂಗಳೂರು : ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಗೃಹ ಸಚಿವ
ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಗ್) ಗೆ ಆಗಮಿಸಿದ್ದು, ಎಸ್‌ಸಿಡಿಸಿಸಿ ಬ್ಯಾಂಕಿನ ಕಾರ್ಯಸಾಧನೆಗೆ ಮೆಚ್ಚುಗೆ
ವ್ಯಕ್ತಪಡಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು ಸಚಿವರುಗಳನ್ನು ಸ್ವಾಗತಿಸಿ, ಬ್ಯಾಂಕಿನ ಪ್ರಗತಿಯ ಬಗ್ಗೆ ವಿವರ ನೀಡಿದರು.
.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು , ಆಧುನಿಕ ತಂತ್ರಜ್ಞಾನದ ಮೂಲಕ 113 ಶಾಖೆಗಳಲ್ಲಿ ಗ್ರಾಹಕರಿಗೆ ಉತ್ಕೃಷ್ಟ ಸೇವೆ ನೀಡುತ್ತಿದೆ. ಬ್ಯಾಂಕಿನ ಎಲ್ಲಾ ಶಾಖೆಗಳು ಕೋರ್ ಬ್ಯಾಂಕಿಂಗ್ ಸೌಲಭ್ಯದೊಂದಿಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ನೀಡುತ್ತಿದೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವ ಸ್ವಸಹಾಯ ಸಂಘಗಳ ಕಾರ್ಯ ನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿ ಸುಮಾರು 40000ಕ್ಕೂ ಹೆಚ್ಚು ನವೋದಯ ಸ್ವಸಹಾಯ ಸಂಘಗಳನ್ನು ಸಂಘಟಿಸಲಾಗಿದೆ. ಮಂಗಳೂರು ಹಾಗೂ ಉಡುಪಿಯಲ್ಲಿ ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕಿಂಗ್
ಸೇವೆಯನ್ನು ನೀಡಲಾಗುತ್ತಿದೆ ಎಂದು ಡಾ.ಎಂ.ಎನ್.ರಾಜೇಂದ್ರಕುಮಾರ್ ಬ್ಯಾಂಕಿನ ಕಾರ್ಯನಿರ್ವಹಣೆಯ ಕುರಿತು ವಿವರಿಸಿದರು
ಸನ್ಮಾನ :
ಎಸ್‌ಸಿಡಿಸಿಸಿ ಬ್ಯಾಂಕಿಗೆ ಪ್ರಥಮ ಬಾರಿಗೆ ಆಗಮಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ. ಎ. ಸಲೀಂ ಅವರನ್ನು ಬ್ಯಾಂಕ್ ವತಿಯಿಂದ
ಡಾ.ಎಂ.ಎನ್.ರಾಜೇಂದ್ರಕುಮಾರ್ ಗೌರವಿಸಿದರು.
ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್. ರೈ ಬಾಲ್ಯೊಟ್ಟು, ಸದಾಶಿವ ಉಳ್ಳಾಲ್, ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ
ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಮೇಘರಾಜ್ ಜೈನ್ ಉಪಸ್ಥಿತರಿದ್ದರು.