ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

scccccccc
Published on



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್
ಬ್ಯಾಂಕ್ ಪ್ರಶಸ್ತಿಯನ್ನು ಗುರುವಾರ ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.
ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನೀಡುತ್ತಿರುವ ರಾಜ್ಯಮಟ್ಟದ ಈ
ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರಕುಮಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಸ್ವೀಕರಿಸಿದರು.
ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷ ಜಿ.ಡಿ.ಹರೀಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್. ದೇವರಾಜ್, ಸಚಿವರು ಹಾಗೂ ನಿರ್ದೇಶಕ ಶಿವಾನಂದ ಎಸ್. ಪಾಟೀಲ್, ನಿರ್ದೇಶಕರಾದ ಸಿದ್ಧಪ್ಪ ಕಲ್ಲಪ್ಪ ಸವದಿ, ಶರಣೇಗೌಡ ಬಯ್ಯಪುರ್, ಶಿವರಾಮ್ ಮಹಾಬಲೇಶ್ವರ ಹೆಬ್ಬಾರ್, ಧಾರಾವಾಡ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಮಲ್ಲಕಾರ್ಜುನ ಎ ಹೊರಕೇರಿ, ಅಪೆಕ್ಸ್ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಅಶ್ವಥ್ ನಾರಾಯಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net