ಸಹಕಾರ ಸಂಘಗಳ ಅಧ್ಯಕ್ಷರಾಗಿ ಆಯ್ಕೆಯಾದ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ

mng-9jan-scdcc
Published on



ಮಂಗಳೂರು : ಜಿಲ್ಲೆಯ ವಿವಿಧ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್)ನ ನಿರ್ದೇಶಕರನ್ನು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಅಭಿನಂದಿಸಿದ್ದಾರೆ.
ಬೆಳುವಾತಿ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ಭಾಸ್ಕರ್.ಎಸ್. ಕೋಟ್ಯಾನ್, ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಮಹೇಶ್ ಶೆಟ್ಟಿ ಎಂ., ಇನ್ನಂಜೆ ವ್ಯವಸಾಯಿಕ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜೇಶ್ ರಾವ್ , ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್. ಎನ್. ಮನ್ಮಥ ಇವರು ಆಯ್ಕೆಯಾಗಿದ್ದಾರೆ. ಇವರುಗಳು ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿದ್ದು ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.
ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ , ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ ರೈ, ಸದಾಶಿವ ಉಳ್ಳಾಲ್, ಜೈರಾಜ್ ಬಿ. ರೈ, ಹರಿಶ್ಚಂದ್ರ, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪ ನಿಬಂಧಕರಾದ ರಮೇಶ್. ಎಚ್.ಎನ್. ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net