

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಬೆಳ್ತಂಗಡಿ ಶಾಖೆಯ ಕಟ್ಟಡದಲ್ಲಿ ಆಗಸ್ಟ್ 27ರಂದು ಹೊಸ ಎ.ಟಿ.ಎಂ. ಉದ್ಘಾಟನೆ ನಡೆಯಲಿದೆ.
ಶಾಸಕ ಹರೀಶ್ ಪೂಂಜ ಉದ್ಘಾಟನೆ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅವರು ಬ್ಯಾಂಕಿನ ನೂತನ ಲಿಫ್ಟ್ ಉದ್ಘಾಟಿಸುವರು. ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.
ಅಭಿವೃದ್ಧಿಯ ಮುಂಚೂಣಿಯಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿದೆ. ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 111 ಶಾಖೆಗಳನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಂದಿದೆ.ಬ್ಯಾಂಕಿಂಗ್ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೊಸ ಎಟಿಎಂ ಆರಂಭಿಸಲಾಗುತ್ತಿದೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.