30ರಂದು ಸಹಕಾರ ಸಂಘಗಳ ಕ್ರೀಡಾಕೂಟ - ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾಹಿತಿ

Screenshot_20231128_174422_Google
Published on




ಮಂಗಳೂರು : ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದ.ಕ.ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ನ.30ರಂದು ಬೆಳಗ್ಗೆ 9ರಿಂದ ಪುತ್ತೂರು ಸರ್ಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ನಡೆಯಲಿದೆ.
ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಸದಸ್ಯರುಗಳನ್ನು, ಸಿಬ್ಬಂದಿ ವರ್ಗವನ್ನು ಹಾಗೂ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರುಗಳನ್ನು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಈ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ರೀಡಾಕೂಟದಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ 100 ಮೀ.ಓಟ, ಗುಂಡು ಎಸೆತ ಹಾಗೂ ಹಗ್ಗ-ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾ ಉಸ್ತುವಾರಿ ಸಚಿವ
ದಿನೇಶ್ ಗುಂಡೂರಾವ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವರು. ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡಲಿರುವರು. ದ.ಕ.ಸಂಸದರು ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿರುವರು. ಶಾಸಕ ಅಶೋಕ್ ಕುಮಾರ್ ರೈ ಕೆ., ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು
ಸಮಾರೋಪ ಸಮಾರಂಭ :
ಸಾಯಂಕಾಲ 4ಕ್ಕೆ ನಡೆಯುವ ಸಮಾರೋಫ ಸಮಾರಂಭದಲ್ಲಿ ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಅವರು ಬಹುಮಾನ ವಿತರಿಸಲಿದ್ದಾರೆ. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ
ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಸರ್ಕಾರಿ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರ ಸಭೆಯ ಮಾಜಿ ಅಧ್ಯಕ್ಷ ಜೀವಂಧರ ಜೈನ್, ಪುತ್ತೂರು ನಗರಸಭೆಯ ಸದಸ್ಯಪಿ. ಜಿ. ಜಗನ್ನಿವಾಸ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.
ಎಸ್‌ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಜೈರಾಜ್ ಬಿ.ರೈ, ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ,ಎಸ್‌ಸಿಡಿಸಿಸಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net