ಅನುಸೂಚಿತ ಜಾತಿ, ಪಂಗಡಗಳ ಕಲ್ಯಾಣ ಸಮಿತಿ ಸಭೆ 14ರಂದು

7 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಹಾಗೂ ಸದಸ್ಯರು ನ. 14ರಂದು ಜಿಲ್ಲೆಗೆ ಭೇಟಿ ನೀಡುವರು. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದು, ಜಿಲ್ಲಾ ಮಟ್ಟದ ಅಽಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಸಿದ್ಧ್ದತೆ ಸಭೆಯಲ್ಲಿ ಅವರು ಮಾತನಾಡಿದರು.

ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಅಧ್ಯಕ್ಷರು ಚರ್ಚಿಸುವರು. ಅಽಕಾರಿಗಳು ನಿಖರ ಮಾಹಿತಿ ಹೊಂದಿರಬೇಕು. ಸುಳ್ಳು ಜಾತಿ ಪ್ರಮಾಣಪತ್ರ ಪ್ರಕರಣಗಳು, ದಲಿತ ಸಮುದಾಯದವರ ಮೇಲಿನ ಹಲ್ಲೆ ಪ್ರಕರಣಗಳ ಸಮರ್ಪಕ ಮಾಹಿತಿ ಹೊಂದಿರಬೇಕು ಎಂದರು.

ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ., ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ವೇದಿಕೆಯಲ್ಲಿದ್ದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮುಗನೂರಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ ಹಾಗೂ ಜಿಲ್ಲಾ ಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net