

ವಿಜಯವಾಣಿ ಸುದ್ದಿಜಾಲ ಧಾರವಾಡ
ನ್ಯಾಯಮೂರ್ತಿ ಡಾ. ಎಚ್.ಎನ್. ನಾಗಮೋಹನ್‌ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಗುರುವಾರ ಆರಂಭಗೊ0ಡ ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ ಕುಟುಂಬಗಳು ಸಮೀಕ್ಷೆಯಿಂದ ಹೊರಗುಳಿಯದಂತೆ ಮುಂಜಾಗ್ರತೆ ವಹಿಸಬೇಕು. ಅರ್ಹ ಕುಟುಂಬಗಳ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಅಂಶಗಳನ್ನು ಸಮೀಕ್ಷೆಯಲ್ಲಿ ದಾಖಲಿಸಬೇಕು. ಮೇ 17ರವರೆಗೆ ಸಮೀಕ್ಷೆ ನಡೆಯಲಿದ್ದು, ಪರಿಶಿಷ್ಟ ಜಾತಿಯ ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲಾಗುವುದು ಎಂದರು.
ಧಾರವಾಡ ಶಹರ ನೋಡಲ್ ಅಽಕಾರಿ, ಬಿಇಒ ಅಶೋಕ ಸಿಂದಗಿ, ಸಮನ್ವಯ ಅಧಿಕಾರಿ ಮಂಜುನಾಥ ಅಡವೇರ, ಕಂದಾಯ ನಿರೀಕ್ಷಕ ಗುರು ಸುಣಗಾರ, ಸಿ.ಆರ್.ಪಿ ರೇಣುಕಾ ಜುಗ್ಗಲ, ಮೇಲ್ವಿಚಾರಕ ಅಶೋಕ ತಳವಾರ, ಗ್ರಾಮ ಆಡಳಿತ ಅಧಿಕಾರಿ ಕರೆಪ್ಪ ಗುಡ್ಡದ, ಸಮೀಕ್ಷೆದಾರರಾದ ಜ್ಯೋತಿ ಹಳಿಂಗಳಿ, ರಾಜಶೇಖರ ಎಡತೇರ, ವಿಜಯಕುಮಾರ ಮೂಲಿಮನಿ, ಇತರರಿದ್ದರು.