ಪರಿಶಿಷ್ಟರ ಅನುದಾನ ನಿಗದಿತ ಉದ್ದೇಶಕ್ಕೆ ಬಳಕೆಯಾಗಲಿ

05 CRP-1A
ಚನ್ನರಾಯಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ್ ಅವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಪುಷ್ಪಾರ್ಚನೆ ಸಲ್ಲಿಸಿದರು. ಎಚ್.ಎನ್.ಲೋಕೇಶ್ ಎಂ.ಆರ್.ಅನಿಲ್ಕುಮಾರ್, ವಿ.ಎಸ್.ನವೀನ್ ಕುಮಾರ್, ಜಿ.ಆರ್.ಹರೀಶ್ ಇದ್ದರು.
Published on

ಚನ್ನರಾಯಪಟ್ಟಣ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸದೆ ನಿಗದಿತ ಉದ್ದೇಶಕ್ಕೆ ಬಳಸಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಸಮಾಜ ಕಲ್ಯಾಣ ಇಲಾಖೆ ಪುರಸಭೆ ಸಂಯುಕ್ತ ಆಶ್ರಯದಲ್ಲಿ ಡಾ. ಬಾಬು ಜಗಜೀವನರಾಮ್ 118ನೇ ಜಯಂತ್ಯುತ್ಸವದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಬಾಬು ಜಗಜೀವನರಾಮ್ ಅವರ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದಾಗಿ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ. ಅಕಾರ ಮತ್ತು ಆಸ್ತಿಯಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ ಹಾಗೂ ತ್ಯಾಗದಿಂದ ಗಳಿಸಬಹುದೆಂದು ಬಾಬು ಜಗಜೀವನರಾಮ್ ಬದುಕು ತಿಳಿಸಿಕೊಡುತ್ತದೆ ಎಂದರು.

ಬಾಬು ಜಗಜೀವನರಾಮ್ ಸತತ 3 ದಶಕಗಳ ಕಾಲ ಕೇಂದ್ರ ಮಂತ್ರಿ ಮಂಡಲದ ಸದಸ್ಯರಾಗಿ ಅಪಾರ ಆಡಳಿತ ಅನುಭವ ಗಳಿಸಿದ್ದರು. ಸಾರಿಗೆ, ಆಹಾರ, ರೈಲ್ವೆ, ಕೃಷಿ ಮತ್ತು ಸಮುದಾಯ ಅಭಿವೃದ್ಧಿ, ಕಾರ್ಮಿಕ ಮತ್ತು ಉದ್ಯೋಗ ಪುನರ್ವಸತಿ ಕೆಲಸವನ್ನು ಮಾಡಿದ ಹಿರಿಮೆ ಅವರದು. ಕೂಲಿ ಮಾಡಿ ಜೀವನ ಸಾಗಿಸಲು ಕಷ್ಟವಾಗಿದ್ದ ಕಾಲಘಟ್ಟದಲ್ಲಿ ಬಾಬು ಜಗಜೀವನರಾಮ್ ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ಬಡವರಿಗೆ ಆಹಾರದ ಕೊರತೆ ದೂರವಾಯಿತು ಎಂದರು.

ಕಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಕೆ.ಸಿ.ರಘು, ಎನ್.ಕುಮಾರ್ ಉಪನ್ಯಾಸ ನೀಡಿದರು. ತಹಸೀಲ್ದಾರ್ ವಿ.ಎಸ್. ನವೀನ್‌ಕುಮಾರ್, ಪೊಲೀಸ್ ಉಪ ಅೀಕ್ಷಕ ಎನ್.ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಜಿ.ಆರ್. ಹರೀಶ್, ಪುರಸಭಾ ಮುಖ್ಯಾಕಾರಿ ಕೆ.ಎನ್. ಹೇಮಂತ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಎನ್. ಸತೀಶ್, ಕ್ಷೇತ್ರ ಶಿಕ್ಷಣಾಕಾರಿ ಎಚ್.ಎನ್.ದೀಪ, ಟಿಎಪಿಸಿಎಂಎಸ್‌ನ ಅಧ್ಯಕ್ಷ ಎಂ.ಆರ್.ಅನಿಲ್ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಕೆಡಿಪಿ ಸದಸ್ಯ ಮಹೇಶ್ ಕಬ್ಬಾಳು, ದಲಿತ ಮುಖಂಡ ಡಾ. ದಂಡೋರು ಮಂಜುನಾಥ್, ನಾಗೇಶ್, ಬೆಕ್ಕಸ್ವಾಮಿ, ಧರ್ಮಯ್ಯ, ಪ್ರಕಾಶ್, ಯೋಗೇಶ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net