ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರ ಅಭ್ಯುದಯಕ್ಕೆ ಯೋಜನೆ

13
Published on

ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕೃಷ್ಣಮೂರ್ತಿಪುರಂ ಶ್ರೀರಾಮಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.

ಬಳಿಕ ಮಾತನಾಡಿ, ಸಂಘಟಿತರಾಗಿ ಒಗ್ಗೂಡಲು ಪ್ರತಿಯೊಬ್ಬ ವಿಪ್ರರೂ ಕಡ್ಡಾಯವಾಗಿ ವಿಪ್ರ ಸಂಘ ಸಂಸ್ಥೆಗಳ ಮಾತೃ ಸಂಸ್ಥೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯರಾಗಲು ಮುಂದಾಗಬೇಕು. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಶಿಕ್ಷಣ, ಉದ್ಯೋಗ, ವೈದ್ಯಕೀಯ, ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಪ್ರೋತ್ಸಾಹ ನೀಡಲು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ನೇತೃತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಹಿರಿಯ ಮುಖಂಡ ಕೆ.ರಘುರಾಮ್ ವಾಜಪೇಯಿ ಮಾತನಾಡಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ಯುವಕರನ್ನು ಮುಖ್ಯವಾಹಿನಿಗೆ ತರಲು ರಾಜ್ಯದೆಲ್ಲೆಡೆ ವಿಪ್ರ ಯುವ ವೇದಿಕೆ ಸಮಿತಿ ರಚಿಸಿ ಬಲಿಷ್ಠಗೊಳಿಸುತ್ತಿದ್ದು, ಸಾಮಾಜಿಕವಾಗಿ ಯುವಕರು ಸಂಘಟಿತರಾಗಬೇಕಿದೆ ಎಂದು ಸಲಹೆ ನೀಡಿದರು.

ನಗರದ ವಿವಿಧ ಬಡಾವಣೆಯ 150ಕ್ಕೂ ಹೆಚ್ಚು ಬ್ರಾಹ್ಮಣರು ಸದಸ್ಯತ್ವ ಪಡೆದರು. ಮಹಾಸಭಾದ ಜಿಲ್ಲಾ ಪ್ರತಿನಿಧಿ ಡಾ.ಲಕ್ಷ್ಮೀದೇವಿ, ವಿಪ್ರ ಮುಖಂಡರಾದ ನಟ ಶ್ರೀಕಂಠಕುಮಾರ್, ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಎಚ್.ಎನ್.ಶ್ರೀಧರಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಖಜಾಂಚಿ ಅಜಯ್ ಶಾಸ್ತ್ರಿ, ಮುಖಂಡರಾದ ಕೆ.ನಾಗರಾಜ್, ಸುಚೇಂದ್ರ, ವಿಜಯ್ ಕುಮಾರ್, ಗುರುರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net