ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮೂಲಸೌಕರ್ಯ: ಶಾಸಕ ಉಮಾನಾಥ ಕೋಟ್ಯಾನ್ ಹೇಳಿಕೆ

New Project (29)
Published on

ಮೂಲ್ಕಿ: ಮೂಲ್ಕಿ-ಮೂಡುಬಿದಿರೆ ಕ್ಷೇತ್ರವು ಸಮಗ್ರ ಅಭಿವೃದ್ಧಿ ಹೊಂದುವ ಯೋಜನೆಗಳನ್ನು ಚಾಲನೆಗೊಳಿಸಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಮೂಲಸೌಕರ್ಯ ಒದಗಿಸುವುದೇ ನಮ್ಮ ಉದ್ದೇಶ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಲ್ಕಿ ನಗರ ಪಂಚಾಯಿತಿ ಸಮುದಾಯ ಭವನದಲ್ಲಿ 2024-25ನೇ ಸಾಲಿನ ಶೇ.7.25ರ ನಿಧಿಯಡಿ ವಿದ್ಯಾರ್ಥಿವೇತನ ಸಹಾಯಧನ ಹಾಗೂ ಶೇ.5ರ ನಿಧಿಯಡಿ ಅರ್ಹ ವಿಕಲಾಂಗ 13 ಫಲಾನುಭವಿಗಳಿಗೆ ಪೋಷಣಾ ಭತ್ಯೆ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.

ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನ.ಪಂ. ಉಪಾಧ್ಯಕ್ಷೆ ಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ ಶೆಟ್ಟಿ ಜಿ.ಎಂ, ಮುಖ್ಯಾಧಿಕಾರಿ ಮಧುಕರ್, ನಗರ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net