

ಬೆಳ್ತಂಗಡಿ: ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ತಮಗೆ ದೊರಕುವ ಎಲ್ಲಾ ಅವಕಾಶಗಳ ಸದುಪಯೋಗ ಪಡೆದು ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಕೇನ್‌ಫಿನ್ ಹೋಮ್ಸ್ ಸಂಸ್ಥೆಯ ಡಿಜಿಎಂ ಪ್ರಶಾಂತ್ ಜೋಶಿ ಹೇಳಿದರು.
ಉಜಿರೆಯಲ್ಲಿ ರೋಟರಿ ಭವನದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಆಶ್ರಯದಲ್ಲಿ ಕೇನ್‌ಫಿನ್ ಹೋಮ್ಸ್ ಸಹಯೋಗದಲ್ಲಿ 222 ವಿದ್ಯಾರ್ಥಿಗಳಿಗೆ ಇಪ್ಪತ್ತು ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಿದರು.
ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಮಾತನಾಡಿ, ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಸಾಮಾಜಿಕ ಪರಿವರ್ತನೆ ಸಾಧ್ಯ ಎಂದರು.
ಬೆಂಗಳೂರು ಇಂದಿರಾನಗರ ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ಸುಪ್ರಿಯಾ ಖಾಂದಾರಿ, ಕೇನ್‌ಫಿನ್ ಹೋಮ್ಸ್ನ ಉಪಪ್ರಬಂಧಕಿ ಚಿತ್ರಾಂಗದ ಸಾರಂಗಿ, ಸುರೇಶ್ ಸಾಲ್ಯಾನ್, ಡಾ.ಎ.ಜಯಕುಮಾರ್ ಶೆಟ್ಟಿ, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್ ಕಾಮತ್, ವಿದ್ಯಾರ್ಥಿವೇತನ ಸಮಿತಿ ಅಧ್ಯಕ್ಷ ಅಬೂಬಕ್ಕರ್, ಗೀತಾ ಪ್ರಭು ಉಪಸ್ಥಿತರಿದ್ದರು.
ಮಂಗಳೂರಿನ ಸರ್ವಜ್ಞ ಐ.ಎ.ಎಸ್. ಅಕಾಡೆಮಿಯ ಸುರೇಶ್, ಎಂ.ಎಸ್. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಿದರು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರೊ.ಪ್ರಕಾಶ್ ಪ್ರಭು ಸ್ವಾಗತಿಸಿದರು. ಬೆಳ್ತಂಗಡಿ ವಕೀಲ ಬಿ.ಕೆ.ಧನಂಜಯ ರಾವ್ ನಿರೂಪಿಸಿದರು. ಕಾರ್ಯದರ್ಶಿ ಉಜಿರೆಯ ಡಾ.ದಯಾಕರ್ ಎಂ.ಎಂ. ವಂದಿಸಿದರು.