

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ, ಸಂಘದ ಗೌರವಾಧ್ಯಕ್ಷರಾಗಿದ್ದ ಮಾಜಿ ಶಾಸಕ ದಿ.ಕೆ.ವಸಂತ ಬಂಗೇರ, ಮಾಜಿ ಉಪಾಧ್ಯಕ್ಷರಾಗಿದ್ದ ದಿ.ಶೇಖರ ಬಂಗೇರ ಹೇರಾಜೆ ಅವರಿಗೆ ನುಡಿ ನಮನ, ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಮಂಗಳವಾರ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನದಲ್ಲಿ ಜರುಗಿತು.
ಬೆಳಗ್ಗೆ ಕಲಶಪೂಜೆ, ಗಣಹೋಮ, ಗುರುಗಳ ವಾರ್ಷಿಕ ವರ್ಧಂತ್ಯುತ್ಸವ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಗುರು ಮಹಾಪೂಜೆ, ಭಜನಾ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಭಾಷಣಗಾರರಾಗಿ ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಾಯನ ಕೇಂದ್ರದ ಅಧ್ಯಕ್ಷ ಪ್ರೊ.ತುಕಾರಾಮ ಪೂಜಾರಿ ನುಡಿ ನಮನ ಸಲ್ಲಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ.ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ ಉಪಸ್ಥಿತರಿದ್ದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ಮಾಜಿ ಅಧ್ಯಕ್ಷರು, ನಿರ್ದೇಶಕರು, ಗ್ರಾಮ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು. ನಿತೇಶ್ ಎಚ್. ಸ್ವಾಗತಿಸಿದರು. ಪ್ರಜ್ಞಾ ಓಡಿಲ್ನಾಳ ನಿರೂಪಿಸಿದರು.