ಪುಸ್ತಕದ ಕಲಿಕೆಯೊಂದಿಗೆ ಬೇಕು ಜೀವನಾನುಭವ : ಡಾ.ಸುಧೀರ್ ಹೆಗ್ಡೆ ಬಣ್ಣನೆ

New Project
Published on

ಮೂಡುಬಿದಿರೆ: ವಿದ್ಯೆಯಿಂದ ಉತ್ತಮ ಬದುಕು ರೂಪಿಸಿಕೊಳ್ಳಬಹುದು. ಪುಸ್ತಕದ ಕಲಿಕೆಯ ಜತೆಗೆ ಜೀವನಾನುಭವ ವಿದ್ಯೆ ಮುಖ್ಯ. ಶಿಸ್ತು, ಸಂಸ್ಕಾರಯುತ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ಆದ್ದರಿಂದ ಪಾಲಕರು ಮಕ್ಕಳ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಲು ಪ್ರೋತ್ಸಾಹ ನೀಡಬೇಕು ಎಂದು ಮಂಗಳೂರಿನ ನೇತ್ರತಜ್ಞ ಡಾ.ಸುಧೀರ್ ಹೆಗ್ಡೆ ಹೇಳಿದರು.

ಭಾನುವಾರ ವೀರಮಾರುತಿ ಸಭಾಭವನದಲ್ಲಿ ಆಯೋಜಿಸಲಾದ ಕೋಟೆಬಾಗಿಲು ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ವತಿಯಿಂದ ಹೆಗ್ಗಡೆ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ಪ್ರಭಾಕರ ಹೆಗ್ಡೆ ಹಟ್ಟಾಜೆಗುತ್ತು ಅಧ್ಯಕ್ಷತೆ ವಹಿಸಿದ್ದರು. ಮಹಾರಾಷ್ಟ್ರ ಕನ್ನಡಿಗ ಕಲಾವಿದರ ಪರಿಷತ್ತಿನ ಅಧ್ಯಕ್ಷ ಡಾ.ಸುರೇಂದ್ರ ಕುಮಾರ್ ಹೆಗ್ಡೆ, ವೀರಮಾರುತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ಯಾಮ ಹೆಗ್ಡೆ, ಯುವ ಕೈಗಾರಿಕೋದ್ಯಮಿ ಅಶ್ವತ್ಥ್ ಹೆಗ್ಡೆ ಬಳಂಜ, ಮುಂಬೈ ಹೆಗ್ಗಡೆ ಸಂಘದ ಪ್ರತಿನಿಧಿ ತಾರಾಮತಿ ಜಿ.ಹೆಗ್ಡೆ, ಬೆಂಗಳೂರು ಹೆಗ್ಗಡೆ ಸಂಘದ ಪ್ರತಿನಿಧಿ ಶ್ರೀನಾಥ್ ಹೆಗ್ಡೆ, ಜಿಲ್ಲಾ ಹೆಗ್ಗಡೆ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ್ ಹೆಗ್ಡೆ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಪುರಸ್ಕರಿಸಲಾಯಿತು. ಸುಧೀಕ್ಷಾ, ಸಾಕ್ಷಿ ಮತ್ತು ಅನುಷಾ ಸನ್ಮಾನ ಪತ್ರ ವಾಚಿಸಿದರು. ಸದಾಶಿವ ಹೆಗ್ಡೆ, ಪ್ರಶಾಂತ್ ಹೆಗ್ಡೆ, ಚೇತನಾ ರಾಜೇಂದ್ರ ಹೆಗ್ಡೆ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರ ಪಟ್ಟಿ ವಾಚಿಸಿದರು. ಸಂಘದ ಕಾರ್ಯದರ್ಶಿ ಶುಭರಾಜ ಹೆಗ್ಡೆ ಸ್ವಾಗತಿಸಿದರು. ಸುಂದರ ಹೆಗ್ಡೆ ವೇಣೂರು ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಕಾರ್ಯದರ್ಶಿ ಅನಿಲ್ ಹೆಗ್ಡೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net