ಬಂಟರ ಸರ್ವ ವಿವರಕ್ಕೆ ವೆಬ್‌ಸೈಟ್ ರಚನೆ : ಅಜಿತ್ ಕುಮಾರ್ ರೈ ಮಾಲಾಡಿ ಮಾಹಿತಿ

New Project (14)
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಇಲ್ಲಿನ ಬಂಟರ ಸಂಘದ ವತಿಯಿಂದ ಬಂಟ ಸಮಾಜದವರ ಸಭೆ, ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಆಯೋಜಿಸಲಾಯಿತು. ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 425 ವಿದ್ಯಾರ್ಥಿಗಳಿಗೆ 12 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿವೇತನ ವಿತರಿಸಲಾಯಿತು.

ಬಂಟರ ಮಾತೃ ಸಂಘ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸಿ, ಜಾಗತಿಕ ಮಟ್ಟದಲ್ಲಿ ಬಂಟ ಸಮುದಾಯವನ್ನು ಗುರುತಿಸಿಕೊಳ್ಳಲು, ನಮ್ಮವರ ಸ್ಥಿತಿಗತಿ ತಿಳಿದುಕೊಳ್ಳಲು ಸಮೀಕ್ಷೆ ನಡೆಸಲಾಗಿದೆ. ಇದರ ಎಲ್ಲ ವಿವರಗಳನ್ನು ಒಳಗೊಂಡ ವೆಬ್‌ಸೈಟ್‌ನ ಶೇ.90ರಷ್ಟು ಕೆಲಸ ಮುಗಿದಿದೆ. ಅತಿಶೀಘ್ರದಲ್ಲಿ ಈ ವೆಬ್‌ಸೈಟ್ ಮೂಲಕ ಎಲ್ಲರನ್ನು ಒಗ್ಗೂಡಿಸುವ ಕಾರ್ಯ ಮಾಡಲಾಗುತ್ತಿದ್ದು, ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

ಬೆಂಗಳೂರು ಸತ್ಯವಾಣಿ ಸಮೂಹ ವಿದ್ಯಾಸಂಸ್ಥೆ ಡಾ.ದೇವಿ ಪ್ರಸಾದ್ ಶೆಟ್ಟಿ, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಿ ವಿದ್ಯೆಯತ್ತ ಹೆಚ್ಚು ಗಮನ ಹರಿಸುವಂತೆ ಸಲಹೆ ನೀಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಹಿರಿಯರ ಮಾರ್ಗದರ್ಶನದಂತೆ ನಾವೆಲ್ಲರೂ ಜವಾಬ್ದಾರಿಯಿಂದ ಕಷ್ಟಪಟ್ಟು ದುಡಿದು, ಸೂಕ್ತ ವಿದ್ಯೆ ಪಡೆದು ಮುಂದುವರಿದರೆ ಸಾಧನೆ ಮಾಡಲು ಸಾಧ್ಯ ಎಂದರು.

ಮಹಿಳಾ ಘಟಕ ಅಧ್ಯಕ್ಷೆ ಶೋಭಾ ಎಸ್.ಹೆಗ್ಡೆ, ಗೌರವಾಧ್ಯಕ್ಷೆ ಕಾಂತಿಲತಾ ಶೆಟ್ಟಿ, ಬಂಟರ ಸಂಘ ಉಪಾಧ್ಯಕ್ಷ ಡಾ.ವಿನಯ ಕುಮಾರ್ ಹೆಗ್ಡೆ, ದಿನಕರ ಶೆಟ್ಟಿ, ದಿವಾಕರ ಶೆಟ್ಟಿ, ಜತೆಕಾರ್ಯದರ್ಶಿ ಸುರೇಶ ಶೆಟ್ಟಿ, ಪ್ರೇಮನಾಥ ಮಾರ್ಲ ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ಕೆ.ಪಿ.ಸುಚರಿತ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಎಂ.ಪುರುಷೋತ್ತಮ ಶೆಟ್ಟಿ, ರಂಜಿತಾ ಶೆಟ್ಟಿ, ಹರಿಣಾಕ್ಷಿ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು. ಶಿವಪ್ರಸಾದ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ವಕೀಲ ಚೇತನ್ ಕುಮಾರ್ ಶೆಟ್ಟಿ ವಂದಿಸಿದರು.

ಸನ್ಮಾನ, ಪ್ರತಿಭಾ ಪುರಸ್ಕಾರ

ಬಂಟರ ಮಹಿಳಾ ಘಟಕ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಅಂತಾರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಕಡಂದಲೆಯ ನಮಿ ರೈ, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವಿಭಾ ಶೆಟ್ಟಿ, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net