28 ಸಾವಿರ ಮಕ್ಕಳಿಗಿಲ್ಲ ಸ್ಕಾಲರ್‌ಶಿಪ್: ಈಶ್ವರಪ್ಪ

EX DCM K S Eshwarappa
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
Published on

ಶಿವಮೊಗ್ಗ: ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ 28 ಸಾವಿರಕ್ಕೂ ಅಧಿಕ ಮಕ್ಕಳಿಗೆ ಎರಡು ವರ್ಷದಿಂದ ಸ್ಕಾಲರ್‌ಶಿಪ್ ನೀಡಿಲ್ಲ. ಶಿವಮೊಗ್ಗದಲ್ಲೇ 10,603 ಮಕ್ಕಳು ಸ್ಕಾಲರ್‌ಶಿಪ್‌ಗೆ ಅಲೆದಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆರೋಪ ಮಾಡಿದರು.

ಮೃತರು, ವಿವಾಹ, ಬಾಣಂತಿಯರ ಅನುದಾನಕ್ಕೂ ಕತ್ತರಿ ಹಾಕಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಆ ಜಿಲ್ಲೆಗಳಲ್ಲಿ ಮುಸ್ಲಿಮರೇ ಹೆಚ್ಚಾಗಿದ್ದಾರೆ. ಅವರ ಓಲೈಕೆಗೆ ಸರ್ಕಾರ ಮುಂದಾಗಿದೆ. ರಾಮನ ಹೆಸರಿದ್ದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಿಸುತ್ತಿದೆ. ಇದು ಕಾಂಗ್ರೆಸ್ ಸರ್ಕಾರ ರಾಮನಿಗೆ ಮಾಡಿದ ಅವಮಾನ. ರಾಮನಗರ ಎಂದೇ ಹೆಸರು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net