

ಲೋಕಾಪುರ: ರೈತ ಕಲ್ಯಾಣ ಯೋಜನೆಯಡಿ ಬಾಗಲಕೋಟೆ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ವ್ಯಾಪ್ತಿಯ ಸಂಘಗಳ ಸದಸ್ಯರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ವಿಜಯಪುರ-ಬಾಗಲಕೋಟೆ ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ ಲಕ್ಷ್ಮಣ ಮಾಲಗಿ ಹೇಳಿದರು.
ಸಮೀಪದ ಬಂಟನೂರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಿಗೆ ವಿದ್ಯಾರ್ಥಿ ವೇತನದ ಚೆಕ್ ವಿತರಿಸಿ ಮಾತನಾಡಿದ ಅವರು, ಉನ್ನತ ಶಿಕ್ಷಣಕ್ಕೆ ಆರ್ಥಿಕ ಅಡೆತಡೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯಡಿ ವಿದ್ಯಾರ್ಥಿ ವೇತನವನ್ನು ನೇರವಾಗಿ ಲಾನುಭವಿಗಳಿಗೆ ಚೆಕ್ ಮುಖಾಂತರ ಜಮಾ ಮಾಡಲಾಗುತ್ತದೆ ಎಂದರು.
ಸಂಘದ ಅಧ್ಯಕ್ಷ ರಮೇಶ ಸಿಂಗರಡ್ಡಿ, ಸದಸ್ಯರಾದ ಲಕ್ಷ್ಮಣ ಸೊನ್ನದ, ಈರಯ್ಯ ಮಠಪತಿ, ಮಾರುತಿ ಮುಗಳೊಳ್ಳಿ, ಪರುಶರಾಮ ಜಾಡರ, ವಿಸ್ತರಣಾಧಿಕಾರಿ ಶ್ರೀದೇವಿ ಗುರವ, ಸಂಘದ ಕಾರ್ಯದರ್ಶಿ ಸಂಗಪ್ಪ ಕಟಗೇರಿ ಉಪಸ್ಥಿತರಿದ್ದರು.