ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸ-ಅಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನ. 24ರಂದು ಬೆಳಗ್ಗೆ 10ಕ್ಕೆ ಇಲ್ಲಿಯ ಅಶೋಕನಗರದ ಡಾ. ಡಿ.ಎಸ್. ಕರ್ಕಿ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವಿಜಯಾನಂದ ಸರಸ್ವತಿ ಮಹಾರಾಜರು ಸಾನ್ನಿಧ್ಯ ವಹಿಸುವರು. ವಿರೋಧ ಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಂಘದ ಅಧ್ಯಕ್ಷ ಸುಭಾಸ ನೇತ್ರೆಕರ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾಲಯ ವಿಶ್ರಾಂತ ಪ್ರೊ. ಡಾ. ಬಿ.ಪಿ. ವಾಘ್ಮೋರೆ ಉಪಸ್ಥಿತರಿರುವರು.
ಪಲ್ಲವಿ ಖಾನಪೇಟ ಮತ್ತು ತಂಡದವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವರು ಎಂದು ಸಂಘದ ಉಪಾಧ್ಯಕ್ಷ ಮಂಜುನಾಥ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.