ವಿದೇಶಿ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಸಲು ಫೆ.5ರವರೆಗೆ ಅವಕಾಶ

Scholarship
Published on

ಮಂಡ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದೇಶಿ ವಿಶ್ವ ವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಎಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.5ರವರೆಗೆ ವಿಸ್ತರಣೆ ಮಾಡಲಾಗಿದೆ. ವಿವರಕ್ಕೆ ಇಲಾಖೆ ವೆಬ್‌ಸೈಟ್ http://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770004 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net