ಮಜೇಥಿಯಾದಿಂದ ವಿದ್ಯಾರ್ಥಿವೇತನ ವಿತರಣೆ

Published on

ಹುಬ್ಬಳ್ಳಿ: ಇಲ್ಲಿಯ ಮಜೇಥಿಯಾ ಫೌಂಡೇಷನ್ ವತಿಯಿಂದ 105 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಗುರುಪೂರ್ಣಿಮೆ ಸಮಾರಂಭ ಜುಲೈ 12ರಂದು ಸಂಜೆ 4ಕ್ಕೆ ನಗರದ ಮೂರುಸಾವಿರ ಮಠದ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಕರ್ನಾಟಕ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಪ್ರೊ. ನಿಜಲಿಂಗಪ್ಪ ಮಟ್ಟಿಹಾಳ, ಕವಿವಿ ಸಿಂಡಿಕೇಟ್ ಸದಸ್ಯ ಡಾ. ಲಿಂಗರಾಜ ಮುಳ್ಳಳ್ಳಿ, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಆಡಳಿತಾಧಿಕಾರಿ ಶರ್ಮಿಲಾ ಹೊಸೂರ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮಜೇಥಿಯಾ ಫೌಂಡೇಷನ್ ಚೇರ್ಮನ್ ಜಿತೇಂದ್ರ ಮಜೇಥಿಯಾ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net