

ಬೆಳ್ತಂಗಡಿ: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿ ಹಾಗೂ ದೇಶದ ಆರ್ಥಿಕತೆ ಸುಧಾರಣೆಯಾಗಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕಾರಣ. ಇಂದಿರಾ ಗಾಂಧಿ ನಾಲ್ಕು ದಶಕಗಳ ಹಿಂದೆ ಜಾರಿಗೆ ತಂದ ಯೋಜನೆಗಳಿಂದ ಇಂದಿಗೂ ಈ ದೇಶದ ಬೆಸ್ಟ್ ಪ್ರಧಾನಿ ಎಂದು ಜಗತ್ತೇ ಹೇಳುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಇಂದಿರಾ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
59 ಸಾವಿರ ರೂ. ವಿದ್ಯಾರ್ಥಿವೇತನ ಮತ್ತು ವೈದ್ಯಕೀಯ ನಿಧಿ ಹಸ್ತಾಂತರ ಮಾಡಲಾಯಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಲಾಯಿಲ, ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾದ ಪ್ರದೀಪ್ ಕೆ.ಸಿ, ತಾಲೂಕು ಎಸ್‌ಸಿ ಘಟಕದ ಅಧ್ಯಕ್ಷರಾದ ನೇಮಿರಾಜ್ ಕಿಲ್ಲೂರು, ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಈಶ್ವರ ಭಟ್ ಮಯ್ತಿಲೊಡಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಮಹಮ್ಮದ್ ಹನೀಫ್ ಉಜಿರೆ, ಬಂಗಾಡಿ ಸೇವಾ ಸಹಕಾರಿ ಸಂಘದ ನಿರ್ದೇಶಕ ಎನ್. ಲಕ್ಷಣ ಗೌಡ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ನಾಮನಿರ್ದೇಶಿತ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.