ವಿದ್ಯಾರ್ಥಿವೇತನ ಬಿಡುಗಡೆಗೆ ಒತ್ತಾಯ: ಬಳ್ಳಾರಿ ಡಿಸಿ ಕಚೇರಿ ಮುಂದೆ ಎಬಿವಿಪಿ ಪ್ರತಿಭಟನೆ

190121 Ballari APVP Appeal for Scholarship
ಬಳ್ಳಾರಿಯ ಡಿಸಿ ಕಚೇರಿ ಬಳಿ ಎಸಿ ರಮೇಶ್ ಕೋನರೆಡ್ಡಿಗೆ ಎದುರು ಎಬಿವಿಪಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
Published on

ಬಳ್ಳಾರಿ: ವಿದ್ಯಾರ್ಥಿವೇತನ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಬಿವಿಪಿ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಎಬಿವಿಪಿ ಕಾರ್ಯದರ್ಶಿ ಹೊನ್ನೂರಸ್ವಾಮಿ ಮಾತನಾಡಿ, ಕರೊನಾ ಸಂಕಷ್ಟದಿಂದ ವಿದ್ಯಾರ್ಥಿವೇತನ ಸ್ಥಗಿತವಾಗಿದೆ. ಇದರಿಂದ ಹಲವು ಬಡ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಈಗಾಗಲೇ ಪದವಿ ತರಗತಿಗಳು ಆರಂಭವಾಗಿವೆ. ಅದರೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯ ವ್ಯವಸ್ಥೆ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ನಲ್ಲಿ ಅವಕಾಶ ಮಾಡಿಕೊಡಬೇಕು. ಕಾಲೇಜುಗಳಲ್ಲಿ ಖಾಲಿ ಉಳಿದಿರುವ ಉಪನ್ಯಾಸಕರ ಹುದ್ದೆಗೆ ಶೀಘ್ರವೇ ನೇಮಕ ಮಾಡಬೇಕು. ವಿದ್ಯಾರ್ಥಿ ವೇತನ ಬಿಡುಗಡೆಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಳಿಕ ಎಸಿ ರಮೇಶ ಕೋನರೆಡ್ಡಿಗೆ ಮನವಿ ಸಲ್ಲಿಸಲಾಯಿತು.

ಸಂಘಟನೆಯ ಪದಾಧಿಕಾರಿಗಳಾದ ಕೌಶಿಕ್, ನವೀನ್, ರುದ್ರೇಶ, ಯುವರಾಜ, ಸ್ವಾತಿ, ನಂದಿನಿ, ಶ್ರೀದೇವಿ, ಪಲ್ಲವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net