ಬ್ರಾಹ್ಮಣ ಸಂಘದಿಂದ ಪುರಸ್ಕಾರ

Published on

ಹುಬ್ಬಳ್ಳಿ: ಇಲ್ಲಿಯ ಕೇಶ್ವಾಪುರ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ.

2023-24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿಜ್ಞಾನ, ಕಲೆ, ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ ನಕಲು ಪ್ರತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಆಗಸ್ಟ್ 5ರ ಒಳಗೆ ಕೇಶ್ವಾಪುರ ಅಂಬಿಕಾ ನಗರದಲ್ಲಿರುವ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಸಂಘದ ಅಧ್ಯಕ್ಷ ಸುನಿಲ ಗುಮಾಸ್ತೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net