6 ವರ್ಷಕ್ಕೆ ಒಂದನೇ ತರಗತಿ| ತಜ್ಞರ ಅಭಿಪ್ರಾಯ ಪಡೆಯದೆ ಶಿಕ್ಷಣ ಇಲಾಖೆಯಿಂದ ಆದೇಶ: ಕಾಂಗ್ರೆಸ್ ಆರೋಪ

Schools
Published on

ಬೆಂಗಳೂರು: ರಾಜ್ಯದೆಲ್ಲೆಡೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಶಿಕ್ಷಣ ಇಲಾಖೆ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಿದ್ದು, ಪೋಷಕರನ್ನು ಗೊಂದಲಕ್ಕೆ ದೂಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ, ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ.

Koo App
ರಾಜ್ಯ ಸರ್ಕಾರ 1ನೇ ತರಗತಿಗೆ ಸೇರುವ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಮೇ ತಿಂಗಳಿನಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಘೋಷಿಸಿದ್ದು, ಈಗಾಗಲೇ ತ್ರೈಮಾಸಿಕ ಅವಧಿ ಮುಕ್ತಾಯವಾಗಿದೆ. ಈ ಆದೇಶ ಈ ವರ್ಷವೇ ಅನ್ವಯವಾಗುವುದೋ, ಮುಂದಿನ ವರ್ಷ ಜಾರಿಯಾಗುತ್ತದಾ ಎಂಬ ಸ್ಪಷ್ಟನೆಯನ್ನೂ ನೀಡಿಲ್ಲ. -@RameshBabuKPCC
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)28 July 2022

ಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ.

Koo App
ಪ್ರಸ್ತುತ ಇರುವ ಕಾನೂನಿನಂತೆ 5 ವರ್ಷ 5 ತಿಂಗಳ ಮಗು ಶಾಲೆಗೆ ದಾಖಲಾತಿ ಪಡೆಯಬಹುದು. ಈಗಾಗಲೇ ರಾಜ್ಯದೆಲ್ಲೆಡೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಈ ಸಂದರ್ಭದಲ್ಲಿ ಯಾವುದೇ ವಿಮರ್ಶೆ ಮಾಡದೆ, ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯದೆ ಈ ಆದೇಶ ಹೊರಡಿಸಲಾಗಿದೆ. - @RameshBabuKPCC
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)28 July 2022

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪರೀಕ್ಷಾ ಮಂಡಳಿಯ ಮೂಲಕ ಖಾಸಗಿ ಸಂಸ್ಥೆ ಬಳಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಇಲಾಖೆಯ ಹಣವನ್ನು ವೈಯಕ್ತಿಕ ಹಾಗೂ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಸಚಿವರಿಂದ ಆ ಹಣವನ್ನು ಹಿಂಪಡೆಯಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

Koo App
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಪರೀಕ್ಷಾ ಮಂಡಳಿಯ ಮೂಲಕ ಖಾಸಗಿ ಸಂಸ್ಥೆ ಬಳಸಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಇಲಾಖೆಯ ಹಣವನ್ನು ವೈಯಕ್ತಿಕ ಹಾಗೂ ಪಕ್ಷದ ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಿ ಸಚಿವರಿಂದ ಆ ಹಣವನ್ನು ಹಿಂಪಡೆಯಬೇಕು. - @RameshBabuKPCC
View attached media content
-ಕರ್ನಾಟಕ ಕಾಂಗ್ರೆಸ್ (@inckarnataka)28 July 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net