ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ

school
ಶಾಲಾ ವಾರ್ಷಿಕೋತ್ಸವ
Published on

ವಿಜಯಪುರ: ಮಕ್ಕಳು ಮೌಢ್ಯದಿಂದ ಹೊರಬರುವ ಜತೆಗೆ ವೈಜ್ಞಾನಿಕ ಮನಸ್ಥಿತಿ ಬೆಳೆಸಿಕೊಳ್ಳಬೇಕೆಂದು ಪವಾಡ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ತಿಳಿಸಿದರು.
ಪಟ್ಟಣದ ಶ್ರೀಗಂಧ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಮಾತನಾಡಿ, ಮಕ್ಕಳಿಗೆ ಮೊಬೈಲ್ ನೀಡುವ ಬದಲು ತಂದೆ-ತಾಯಿ ಪ್ರೀತಿ, ವಾತ್ಸಲ್ಯ ನೀಡಿ ಬೆಳೆಸಬೇಕು ಎಂದು ತಿಳಿಸಿದರು.
ಸಂಸ್ಥೆ ಅಧ್ಯಕ್ಷ ರಘುರಾಮ್ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವ ಜತೆಗೆ ರಾಷ್ಟ್ರಪ್ರೇಮ, ದೇಶಭಕ್ತಿ ಬೆಳೆಸುವ ವಾತಾವರಣ ನಿರ್ಮಾಣವಾಗಬೇಕೆಂದು ತಿಳಿಸಿದರು.
ಶಾಲಾ ಮುಖ್ಯಶಿಕ್ಷಕ ಶರಣಯ್ಯ ಹಿರೇಮಠ್, ಶಾಲಾ ವಾರ್ಷಿಕ ವರದಿ ಮಂಡಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net