

ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರೆ ಹೆಚ್ಚಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡಿ ಅವರ ಭವಿಷ್ಯ ಉಜ್ವಲಗೊಳಿಸಬೇಕಿದೆ ಎಂದು ಸಂಸದ ಬಿ.ಎನ್. ಬಚ್ಚೇಗೌಡ ಹೇಳಿದರು.
ತಾಲೂಕಿನ ಕಸಬಾ ಹೋಬಳಿಯ ಚೊಕ್ಕಹಳ್ಳಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರಿದಂದ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎದ ಅವರು, ಈ ಕಟ್ಟಡ ನಿರ್ಮಾಣಕ್ಕೆ ದಕ್ಷಿಣ ಪೌಂಡ್ರಿ ಸಂಸ್ಥೆಯ ವಿಶ್ವಜಿತ್ ಬ್ಯಾನರ್ಜಿ ಸಿಎಸ್‌ಆರ್ ಅನುದಾನದಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದು ಪ್ರಶಂಶಿಸಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಎಲ್‌ಎನ್‌ಟಿ ಮಂಜುನಾಥ್, ಬಿಇಒ ವಿವೇಕಾನಂದ, ಸಿಡಿಪಿಒ ವಿದ್ಯಾ, ಪಿಡಿಒ ಮಹೇಶ್, ಮುಖಂಡರಾದ ರಾಜ್‌ಗೋಪಾಲ್, ಗಣೇಶ್, ತಮ್ಮಣ್ಣ, ಚಿಕ್ಕಹುಲ್ಲೂರು ಬಚ್ಚೇಗೌಡ, ಸಂಪಣ್ಣ, ಮಹೇಶ್, ಲಲಿತಾ, ಮಧುಶ್ರೀ, ರಾಮಾಂಜಿನಿ, ಷಪಿಯುಲ್ಲಾ ಇತರರು ಇದ್ದರು.