

ಬಳ್ಳಾರಿ: ನಗರದ ಮೂರನೇ ವಾರ್ಡ್ ವ್ಯಾಪ್ತಿಯ ವಿ.ಎನ್.ಲಾಲ್ ಕಮಾನ್ ಬೀದಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕಟ್ಟಡ ಮರು ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಶಾಸಕ ನಾರಾ ಭರತರೆಡ್ಡಿ ಹೇಳಿದರು. ನಗರದ ಮೂರನೇ ವಾರ್ಡ್‌ಗೆ ಸಲಾಂ ಬಳ್ಳಾರಿ ಅಭಿಯಾನದ ನಿಮಿತ್ತ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. ಒಂದು ಕೋಟಿ ರೂ.ವೆಚ್ಚದಲ್ಲಿ ಶಾಲಾ ಕಟ್ಟಡದ ಮರು ನಿರ್ಮಾಣ ಮಾಡಲಾಗುವುದು ಎಂದರು. ಪಾಲಿಕೆ ಸದಸ್ಯ ಎಂ.ಪ್ರಭಂಜನ ಕುಮಾರ ಇತರರಿದ್ದರು.