ಶಾಲಾ ಕಟ್ಟಡ ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯ

27-12-Shiva-2
Published on

ರಾಯಚೂರು: ತಾಲೂಕಿನ ಅರಸಿಗೇರಾ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಛಾವಣಿ ಕುಸಿದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬುಧವಾರ ಜರುಗಿದೆ. ಚಂದ್ರಕಲಾ ಎಂಬ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ.
ತರಗತಿ ನಡೆಯುತ್ತಿರುವಾಗ ಛಾವಣಿಯ ಸಿಮೆಂಟ್ ಕುಸಿದು ವಿದ್ಯಾರ್ಥಿಗಳ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಹೆಚ್ಚಿನ ಅಪಾಯವುಂಟಾಗಿಲ್ಲ. ಗಾಯಗೊಂಡ ವಿದ್ಯಾರ್ಥಿಗಳನ್ನು ನಗರದ ರಿಮ್ಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ.
ಶಾಲಾ ಕಟ್ಟಡ ನಿರ್ಮಾಣವಾಗಿ ಕೇವಲ ಒಂದು ವರ್ಷವಾಗಿದ್ದು, ಮೂರು ತಿಂಗಳ ಹಿಂದೆ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ. ನಿರ್ಮಿತಿ ಕೇಂದ್ರ ಕಟ್ಟಡವನ್ನು ನಿರ್ಮಾಣ ಮಾಡಲಾಗಿದ್ದು, ಕಳಪೆ ಕಾಮಗಾರಿಯಿಂದ ಈ ಅವಘಡ ಜರುಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net