ಶಾಲೆ- ಕಾಲೇಜುಗಳ ರಜೆ ಮುಂದುವರಿಕೆ

web
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯÁದ್ಯಂತ ನಿರಂತರ ಮಳೆ ಮತ್ತು ಶೀತ ಗಾಳಿ ಬೀಸುತ್ತಿರುವುದರಿಂದ ಜುಲೈ 27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಮುಂದುವರಿಸಿ ಜಿಲ್ಲಾಽಕಾರಿ ದಿವ್ಯ ಪ್ರಭು ಶುಕ್ರವಾರ ಆದೇಶಿಸಿದ್ದಾರೆ.
ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗಳಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದದ ಖಾಸಗಿ, ಅನುದಾನಿತ, ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮÁಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net